ಕೀನ್ಯಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

ಭಾನುವಾರ, 25 ಸೆಪ್ಟಂಬರ್ 2022 (10:10 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಗೆಳೆಯ, ನಿರ್ದೇಶಕ ಪ್ರೀತಂ ಗುಬ್ಬಿ ಕಾಂಬಿನೇಷನ್ ನಲ್ಲಿ ಬಾನ ದಾರಿಯಲ್ಲಿ ಎಂಬ ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.

ಈ ಸಿನಿಮಾ ತಂಡ ಕೆಲವು ದಿನ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸಿತ್ತು. ಇದೀಗ ಕೀನ್ಯಾ ದೇಶಕ್ಕೆ ಪ್ರಯಾಣ ಬೆಳೆಸಿದೆ.

ಚಿತ್ರದ ಕೆಲವು ಭಾಗಗಳ ಚಿತ್ರೀಕರಣ ಕೀನ್ಯಾದಲ್ಲಿ ನಡೆಯಲಿದ್ದು, ಇದೀಗ ಶೂಟಿಂಗ್ ಆರಂಭವಾಗಿದೆ. ಇಲ್ಲಿನ ಮಾರುಕಟ್ಟೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ