ಅಪ್ಪನ ಹೆಗಲೇರಿ ಡಬ್ಬಿಂಗ್ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್ ಪುತ್ರ!

ಶುಕ್ರವಾರ, 2 ಆಗಸ್ಟ್ 2019 (09:09 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಪುತ್ರ ವಿಹಾನ್ ಅಪ್ಪನ ಜತೆಗೆ ಗೀತಾ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದು ಎಲ್ಲರಿಗೂ ಗೊತ್ತೇ ಇದೆ. ಇಷ್ಟು ಚಿಕ್ಕ ವಯಸ್ಸಿಗೆ ಸಿನಿಮಾದಲ್ಲಿ ಅಭಿನಯಿಸಿದ್ದಲ್ಲದೆ ಈ ಪೋರ ಈಗ ತನ್ನ ಪಾತ್ರಕ್ಕೆ ತಾನೇ ಡಬ್ಬಿಂಗ್ ಮಾಡಿ ಮುಗಿಸಿದ್ದಾರೆ.


ಗಣೇಶ್ ಪುತ್ರನನ್ನು ಎತ್ತಿಕೊಂಡು ಮಾರು ಉದ್ದದ ಮೈಕ್ ಮುಂದೆ ನಿಲ್ಲಿಸಿ ಡಬ್ಬಿಂಗ್ ಮಾಡುತ್ತಿರುವ ಫೋಟೋ ಪ್ರಕಟಿಸಿದ್ದು, ವಿಹಾನ್ ತನ್ನ ಪಾತ್ರಕ್ಕೆ ತಾನೇ ಡಬ್ಬಿಂಗ್ ಮಾಡಿದ್ದಾನೆ, ಆತನ ಮೇಲೆ ನಿಮ್ಮ ಆಶೀರ್ವಾದವಿರಲಿ ಎಂದು ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡಿರುವ ಗೀತಾ ಸಿನಿಮಾದ ಅಡಿಯೋ ರಿಲೀಸ್ ಸದ್ಯದಲ್ಲೇ ನಡೆಯಲಿದೆ ಎಂದು ಗಣೇಶ್ ಹೇಳಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ