ಮೋಹಕ ತಾರೆ ಅಭಿಮಾನಿಗಳಿಗೆ ಸಿಹಿಸುದ್ದಿ: ರಮ್ಯಾ-ಉಪೇಂದ್ರ ಅಭಿನಯದ ಸಿನಿಮಾ ತೆರೆಗೆ ಬರಲು ಸಜ್ಜು

Sampriya

ಬುಧವಾರ, 4 ಡಿಸೆಂಬರ್ 2024 (15:16 IST)
Photo Courtesy X
ಬೆಂಗಳೂರು: ಬಹುವರ್ಷಗಳಿಂದ ಕಾಯುತ್ತಿರುವ ಮೋಹಕ ತಾರೆ ರಮ್ಯಾ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ರಿಯಲ್‌ ಸ್ಟಾರ್‌ ಉಪೇಂದ್ರ ಜೊತೆ ರಕ್ತ ಕಾಶ್ಮೀರದ ಕಥೆ ಹೇಳಲು ರಮ್ಯಾ ಸಜ್ಜಾಗಿದ್ದಾರೆ.

17 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಉಪೇಂದ್ರ ಮತ್ತು ರಮ್ಯಾ ಅಭಿನಯದ ರಕ್ತ ಕಾಶ್ಮೀರ ಸಿನಿಮಾ ಮುಂದಿನ ವರ್ಷ ತೆರೆಗೆ ಬರಲಿದೆ. ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಭಯೋತ್ಪಾದನೆಯ ಕಥಾವಸ್ತುವನ್ನು ಒಳಗೊಂಡ ಈ ಚಿತ್ರದಲ್ಲಿ ಪುನೀತ್, ದರ್ಶನ್, ವಿಷ್ಣುವರ್ಧನ್ ಸೇರಿದಂತೆ ಹಲವು ನಟರು ಒಂದು ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಎಂಡಿಎಂ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್. ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ಉಪೇಂದ್ರ ಹಾಗೂ ರಮ್ಯಾ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ.‌ ಇದೇ ಚಿತ್ರದ ಪ್ರಮುಖ ಕಥಾಹಂದರವಾಗಿದೆ. ಗಡಿ ಪ್ರದೇಶ ಅಷ್ಟೇ ಅಲ್ಲ. ಬೆಂಗಳೂರಿನಲ್ಲೂ ಉಗ್ರಗಾಮಿಗಳ ಕಾಟವಿದೆ. ಅದರ ನಿರ್ಮೂಲನೆಗೆ‌ ಸಂಬಂಧಿಸಿದ ಕಥಾವಸ್ತುವನ್ನೂ ಈ ಚಿತ್ರ ಹೊಂದಿದೆ ಎನ್ನಲಾಗಿದೆ.

ಈ ಸಿನಿಮಾ ಜನವರಿಯಲ್ಲಿ ತೆರೆಗೆ ಬರಲು ಸಜ್ಜಾಗಿದೆ. ಎಂಎಸ್‌ ರಮೇಶ್ ಅವರ ಸಂಭಾಷಣೆ ಈ ಚಿತ್ರಕ್ಕಿದ್ದು, ಗುರುಕಿರಣ್‌ ಸಂಗೀತ ನೀಡಿದ್ದಾರ. ಉಪೇಂದ್ರ ರಮ್ಯಾ ಅಲ್ಲದೆ, ಪಾರ್ವತಿ ಮಿಲ್ಟನ್‌, ದೊಡ್ಡಣ್ಣ, ಓಂಪ್ರಕಾಶ್‌ ರಾವ್‌ ಮುಂತಾದವರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ