ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮದಿನ ಇನ್ನು ಸ್ಪೂರ್ತಿ ದಿನ
ಸಚಿವ ವಿ. ಸುನಿಲ್ ಕುಮಾರ್ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಇದನ್ನು ಸಿಎಂ ಕೂಡಾ ಅನುಮೋದಿಸಿದ್ದಾರೆ.
ಪುನೀತ್ ರಾಜ್ ಕುಮಾರ್ ನಿರ್ಮಾಪಕನಾಗಿ, ನಟನಾಗಿ, ಸಾಮಾಜಿಕ ಸೇವೆಗಳಿಂದ ಅನೇಕರಿಗೆ ಸ್ಪೂರ್ತಿಯಾಗಿದ್ದಾರೆ. ಹೀಗಾಗಿ ಅವರ ಗೌರವಾರ್ಥ ಅವರ ಜನ್ಮದಿನವನ್ನು ಸ್ಪೂರ್ತಿ ದಿನವಾಗಿ ಆಚರಿಸಬೇಕೆಂದು ಸುನಿಲ್ ಕುಮಾರ್ ಮನವಿ ಮಾಡಿದ್ದರು. ಇದಕ್ಕೆ ಸಿಎಂ ಅನುಮೋದನೆ ನೀಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.