ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಟ್ರೈಲರ್ ಗೆ ಭರ್ಜರಿ ಪ್ರತಿಕ್ರಿಯೆ

ಸೋಮವಾರ, 5 ಆಗಸ್ಟ್ 2019 (09:12 IST)
ಬೆಂಗಳೂರು: ಒಂದು ಮೊಟ್ಟೆಯ ಕತೆ ಎನ್ನುವ ಸಿನಿಮಾ ಮೂಲಕ ಪರಿಚಿತರಾದ ರಾಜ್ ಬಿ ಶೆಟ್ಟಿ ಮತ್ತು ಕವಿತಾ ಗೌಡ ಅಭಿನಯದ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಸಿನಿಮಾ ಟ್ರೈಲರ್ ಗೆ ಭಾರೀ ಪ್ರತಿಕ್ರಿಯೆ ಬಂದಿದೆ.

 

ಮೊನ್ನೆಯಷ್ಟೇ ಬಿಡುಗಡೆಯಾಗಿದ್ದ ಟ್ರೈಲರ್ ಈಗ 1 ಮಿಲಿಯನ್ ವ್ಯೂ ದಾಟಿ ಮುನ್ನುಗ್ಗುತ್ತಿದೆ. ಕಾಮಿಡಿ ಎಂಟರ್ ಟೈನರ್ ಸಿನಿಮಾ ಆಗಸ್ಟ್ 15 ರಂದು ಬಿಡುಗಡೆಯಾಗುತ್ತಿದೆ.

ಸ್ವಾತಂತ್ರ್ಯೋತ್ಸವದ ದಿನ ಈ ಸಿನಿಮಾ ಪ್ರೇಕ್ಷಕರಿಗೆ ಭರ್ಜರಿ ಗಿಫ್ಟ್ ಆಗಲಿದೆ. ರಾಜ್ ಬಿ ಶೆಟ್ಟಿಯ ಎಂದಿನ ಶೈಲಿ ಮುಗ್ಧತೆ, ಕಾಮಿಡಿ ಎಲ್ಲವೂ ಈ ಚಿತ್ರದಲ್ಲಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ