ಕನ್ನಡತಿ ಹರ್ಷಿಕಾ ಪೂಣಚ್ಚ ಭೋಜ್ ಪುರಿ ಸಿನಿಮಾಗೆ ಎಂಟ್ರಿ

ಗುರುವಾರ, 19 ನವೆಂಬರ್ 2020 (10:36 IST)
ಬೆಂಗಳೂರು: ಪಕ್ಕಾ ಕನ್ನಡತಿ ನಟಿ ಹರ್ಷಿಕಾ ಪೂಣಚ್ಚ ಈಗ ಭೋಜ್ ಪುರಿ ಸಿನಿಮಾದಲ್ಲಿ ಮೊದಲ ಬಾರಿಗೆ ಅಭಿನಯಿಸುತ್ತಿದ್ದಾರೆ.


ಸದ್ಯಕ್ಕೆ ಈ ಸಿನಿಮಾದ ಚಿತ್ರೀಕರಣಕ್ಕಾಗಿ ಹರ್ಷಿಕಾ ಲಂಡನ್ ನಲ್ಲಿ ಬೀಡುಬಿಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಭೋಜ್ ಪುರಿ ಸಿನಿಮಾದಲ್ಲಿ ಅಭಿನಯಿಸುತ್ತಿರುವುದು ಖುಷಿಕೊಟ್ಟಿದೆ ಎಂದು ಹರ್ಷಿಕಾ ಹೇಳಿಕೊಂಡಿದ್ದಾರೆ. ಹೊಸದೊಂದು ಚಿತ್ರರಂಗಕ್ಕೆ ಕಾಲಿಟ್ಟಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ ಎಂದು ಹರ್ಷಿಕಾ ಕೇಳಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ