ಹಿರಿಯ ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ

ಮಂಗಳವಾರ, 26 ಸೆಪ್ಟಂಬರ್ 2023 (16:49 IST)
Photo Courtesy: Instagram
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ಪೋಷಕ ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ. ಆಂಜಿಯೋಗ್ರಾಮ್ ಮಾಡಲಾಗುತ್ತಿದ್ದು, ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದೆ ಎನ್ನಲಾಗಿದೆ.

74 ವರ್ಷದ ಬ್ಯಾಂಕ್ ಜನಾರ್ಧನ್ ಸಾಹಸಸಿಂಹ ವಿಷ್ಣುವರ್ಧನ್, ಜಗ್ಗೇಶ್ ಸೇರಿದಂತೆ ಕನ್ನಡದ ಬಹುತೇಕ ನಟರ ಸಿನಿಮಾಗಳಲ್ಲಿ ಹಾಸ್ಯ ಕಲಾವಿದರಾಗಿ, ಪೋಷಕ ಕಲಾವಿದರಾಗಿ ಪಾತ್ರ ನಿರ್ವಹಿಸಿದ್ದರು. ಇತ್ತೀಚೆಗಿನ ದಿನಗಳಲ್ಲಿ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಆದರೆ ಕನ್ನಡ ಸಿನಿಮಾ ರಂಗದ ಪ್ರಮುಖ ಹಾಸ್ಯ ನಟರ ಹೆಸರುಗಳ ಪಟ್ಟಿಯಲ್ಲಿ ಬ್ಯಾಂಕ್ ಜನಾರ್ಧನ್ ಹೆಸರೂ ಪ್ರಮುಖವಾಗಿ ಬರುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ