ರಸ್ತೆ ಅಪಘಾತದಲ್ಲಿ ಮೃತಪಟ್ಟ ಸ್ಯಾಂಡಲ್ ವುಡ್ ನ ಯುವ ನಟ ಹೇಮಂತ್ ಕುಮಾರ್

ಗುರುವಾರ, 16 ಆಗಸ್ಟ್ 2018 (06:59 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಯುವ ನಟ ಹಾಗೂ ನಿರ್ದೇಶಕ ಹೇಮಂತ್ ಕುಮಾರ್ (25)  ಬುಧವಾರ (ನಿನ್ನೆ) ನೆಲಮಂಗಲದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.


ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ವೀರನಂಜೀಪುರ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿ 4ರ ರಸ್ತೆ ವಿಭಜಗಕ್ಕೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಹೇಮಂತ್ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಎರಡು ಕೈಗಳಿಲ್ಲದ ಅಂಗವಿಕಲ ಹೇಮಂತ್ ಕುಮಾರ್ ಕಿರುತೆರೆಯ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ತನ್ನದೇ ಆದ ಕಿರು ಚಿತ್ರಗಳಿಗೆ ನಿರ್ದೇಶನ ಮಾಡುತ್ತಿದ್ದರು. ಅರ್ಜುನ್ ಜನ್ಯ ಹಾಗೂ ದುನಿಯಾ ವಿಜಿ ಅವರ ಮೆಚ್ಚುಗೆಗೆ ಸಹ ಪಾತ್ರರಾಗಿದ್ದರು. ಹೈಕ ಎಂಬ ಕಿರುಚಿತ್ರಕ್ಕೆ ಧ್ವನಿ ಕೂಡ ನೀಡಿದ್ದರು. ಕೈಗಳು ಇಲ್ಲದಿದ್ದರೂ ಇವರು ಕಾಲುಗಳನ್ನು ಬಳಸಿಕೊಂಡು ಬೈಕ್ ಚಲಾಯಿಸುತ್ತಿದ್ದದ್ದು ವಿಶೇಷವಾಗಿತ್ತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ