ಮಲಯಾಳಂ ನಟ ಪೃಥ್ವಿರಾಜ್ ಜೊತೆ ಪ್ಯಾನ್ ಇಂಡಿಯಾ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲಂಸ್

ಶನಿವಾರ, 11 ಜೂನ್ 2022 (09:10 IST)
ಬೆಂಗಳೂರು: ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಕೆಜಿಎಫ್, ಸಲಾರ್ ಬಳಿಕ ಈಗ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆ ಮಾಡಿದೆ.

ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಜೊತೆ ಹೊಂಬಾಳೆ ಫಿಲಂಸ್ ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆ ಮಾಡಿದ್ದು, ಇದಕ್ಕೆ ಟೈಸನ್ ಎಂದು ಟೈಟಲ್ ಇಡಲಾಗಿದೆ.

ಸ್ವತಃ ಪೃಥ್ವಿರಾಜ್ ಅವರೇ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಇದು ಅವರ ನಿರ್ದೇಶನದ ನಾಲ್ಕನೇ ಸಿನಿಮಾವಾಗಲಿದೆ. ಇದು ಐಎಎಸ್ ಅಧಿಕಾರಿ ರಂಜನ್ ಎಂಬ ವ್ಯಕ್ತಿಯ ಕುರಿತಾದ ಕತೆ ಎಂದು ಪೋಸ್ಟರ್ ಹೇಳುತ್ತಿದೆ. ಚಿತ್ರ 2023 ರಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ