3000 ಕೋಟಿ ಹೂಡಿಕೆ ಹೊಂಬಾಳೆ ಫಿಲಂಸ್ ಗುರಿ: ಮತ್ತಷ್ಟು ಬಿಗ್ ಬಜೆಟ್ ಸಿನಿಮಾ ನಿರ್ಮಾಣ
ಕೆಜಿಎಫ್, ಸಲಾರ್, ಕಾಂತಾರದಂತಹ ಬಿಗ್ ಸಿನಿಮಾಗಳ ನಿರ್ಮಾಪಕರಾಗಿರುವ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು ಹೊಸ ವರ್ಷದಂದು ಅಭಿಮಾನಿಗಳಿಗೆ ತಮ್ಮ ಮುಂದಿನ ಐದು ವರ್ಷಗಳ ಗುರಿ ಬಗ್ಗೆ ಹೇಳಿಕೊಂಡಿದ್ದಾರೆ.
ಈಗಾಗಲೇ ಕೆಜಿಎಫ್ 1000 ಕೋಟಿಗೂ ಅಧಿಕ ಗಳಿಕೆ ಮಾಡಿತ್ತು. ಕಾಂತಾರ 400 ಕೋಟಿಗೂ ಅಧಿಕ ಗಳಿಕೆ ಮಾಡಿತ್ತು. ಹೀಗಾಗಿ ಈ ಎಲ್ಲಾ ಸಿನಿಮಾಗಳಿಂದ ಬಂದ ಲಾಭವನ್ನು ಹೊಸ ಸಿನಿಮಾಗಳಿಗೆ ಹೂಡಿಕೆ ಮಾಡಲಿದೆ. ಪರಭಾಷೆಗಳಲ್ಲೂ ಚಿತ್ರ ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲಂಸ್ ಇನ್ನಷ್ಟು ಬಿಗ್ ಬಜೆಟ್ ಸಿನಿಮಾಗಳನ್ನು ಘೋಷಣೆ ಮಾಡಲಿದೆ.