2013ರ ವಿಧಾನಸಭೆ ಚುನಾವಣೆಯಲ್ಲಿ ಪೂಜಾ ಗಾಂಧಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಬಾರಿ ನ್ಯಾಯಾಲಯಕ್ಕೆ ಗೈರು ಹಾಜರಾಗಿದ್ದರು. ಇದರಿಂದ ಗರಂ ಆಗಿರುವ ನ್ಯಾಯಮೂರ್ತಿಗಳು ಒಂದು ವೇಳೆ ಇಂದು ನ್ಯಾಯಾಲಯಕ್ಕೆ ಹಾಜರಾಗದಿದ್ದಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವುದಾಗಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.