ಹಾಟ್ ನಟಿ ರಾಧಿಕಾ ಕಾಂಗ್ರೆಸ್ ಸೇರ್ತಾರಾ? ಬಿಜೆಪಿ ಸೇರ್ತಾರಾ?

ಸೋಮವಾರ, 13 ನವೆಂಬರ್ 2017 (19:17 IST)
ಸ್ಯಾಂಡಲ್‌ವುಡ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟಿ ರಾಧಿಕಾ ಕುಮಾರಸ್ವಾಮಿ ರಾಜ್ಯ ರಾಜಕೀಯಕ್ಕೆ ಧುಮುಕಲು ಚಿಂತನೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ರಾಧಿಕಾ ತಮ್ಮ ರಾಜಕೀಯ ಮಹತ್‌ಕಾಂಕ್ಷೆಯನ್ನು ಕೆಲ ಹಿರಿಯ ಕಾಂಗ್ರೆಸ್ ನಾಯಕರ ಮುಂದೆ ತೋಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಚಿಂಥನ ಮಂಥನ ನಡೆಸಿ ಸದ್ಯಕ್ಕೆ ಬೇಡ ಎಂದು ರೆಡ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ.
 
ಒಂದು ವೇಳೆ, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಅವಕಾಶ ದೊರೆಯದಿದ್ದಲ್ಲಿ ಬಿಜೆಪಿಗೆ ಸೇರ್ತಾರಾ ಎನ್ನುವ ಅನುಮಾನ ಎಲ್ಲರನ್ನು ಕಾಡುತ್ತಿದೆ. ರಾಧಿಕಾಗೆ ಮೊದಲಿನಿಂದಲೂ ರಾಜಕೀಯ ಸೇರುವ ಆಕಾಂಕ್ಷೆ ಹೊಂದಿದ್ದಾರೆ ಎನ್ನಲಾಗುತ್ತಿದೆ.
 
ರಾಧಿಕಾ ಯಾವ ಪಕ್ಷ ಸೇರುತ್ತಾರೆ ಎನ್ನುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ