ರಾಜ್ಯದ ಎಷ್ಟು ಚಿತ್ರಮಂದಿರಗಳಲ್ಲಿ ಪುನೀತ್ಗೆ ನಮನ?

ಭಾನುವಾರ, 7 ನವೆಂಬರ್ 2021 (10:22 IST)
ಇಂದು ಸಂಜೆ 6 ಗಂಟೆಗೆ ರಾಜ್ಯದ ಚಿತ್ರಮಂದಿರಗಳಲ್ಲಿ ನಟ ಪುನೀತ್ ರಾಜಕುಮಾರ್ಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ.
ಚಿತ್ರ ಪ್ರದರ್ಶಕರ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಒಟ್ಟು 550ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪುನೀತ್ಗೆ ನಮನ ಸಲ್ಲಿಸಲಾಗುತ್ತಿದ್ದು, ಕಾರ್ಯಕ್ರಮದ ರೂಪುರೇಶೆಯನ್ನೂ ಸಿದ್ಧಪಡಿಸಲಾಗಿದೆ. ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರು ನಟ ಪುನೀತ್‌ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಿದ್ದಾರೆ. ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ಚಿತ್ರಮಂದಿರಗಳಲ್ಲಿ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನದ ಮೂಲಕ ಪುಷ್ಪಾಂಜಲಿ ಹಾಗೂ ಥಿಯೇಟರ್‌ಗಳಲ್ಲಿ ಕ್ಯಾಂಡಲ್ ಹಚ್ಚಿ ದೀಪಾಂಜಲಿ ನಡೆಸಲಾಗುತ್ತದೆ. ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್‌ಗೆ ಥಿಯೇಟರ್ ಸಿಬ್ಬಂದಿ ಹಾಗೂ ಅಭಿಮಾನಿಗಳಿಂದ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ