ಅಲ್ಲು ಅರ್ಜುನ್ ‘ಪುಷ್ಪಾ’ ಚಿತ್ರದ ಆ್ಯಕ್ಷನ್ ಎಪಿಸೋಡ್ ಗಾಗಿ ಖರ್ಚಾದ ಹಣವೆಷ್ಟು ಗೊತ್ತಾ?

ಸೋಮವಾರ, 19 ಏಪ್ರಿಲ್ 2021 (11:53 IST)
ಹೈದರಾಬಾದ್ : ಸುಕುಮಾರ್ ನಿರ್ದೇಶನದ ಆ್ಯಕ್ಷನ್ ಥ್ರಿಲ್ಲರ್ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸುತ್ತಿದ್ದಾರೆ.

ಈ ಚಿತ್ರ ಕೆಂಪುಶ್ರೀಗಂಧದ ಕಳ್ಳಸಾಗಾಣಕೆಯ ಕುರಿತಾದ ಕಥೆಯನ್ನು ಒಳಗೊಂಡಿದೆ. ಇದು ಸಂಪೂರ್ಣವಾಗಿ ಆ್ಯಕ್ಷನ್ ಥ್ರಿಲ್ಲರ್ ಚಿತ್ರವಾಗಿದೆ. ಈ ಚಿತ್ರದ ಆ್ಯಕ್ಷನ್ ಎಪಿಸೋಡ್ ಗಳಿಗಾಗಿ 40ಕೋಟಿ ರೂ. ಖರ್ಚು ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ಚಿತ್ರ ಆಗಸ್ಟ್ 13ರಂದು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ‍್ಣ ಅಲ್ಲು ಅರ್ಜುನ್ ಅವರಿಗೆ ಜೋಡಿಯಾಗಿ ನಟಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ