ಕಮಲ್ ಹಾಗೂ ರಜನಿ ಸಿನಿಮಾಗಳನ್ನು ರಾಜ್ಯದಲ್ಲಿ ಪ್ರದರ್ಶನ ಮಾಡಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದೇನೆ- ಸಾರಾ ಗೋವಿಂದು

ಬುಧವಾರ, 11 ಏಪ್ರಿಲ್ 2018 (07:46 IST)
ಬೆಂಗಳೂರು : ನಟ ರಜನೀಕಾಂತ್ ಹಾಗೂ ನಟ ಕಮಲ್ ಹಾಸನ್ ಅವರ  ಸಿನಿಮಾವನ್ನು ರಾಜ್ಯದಲ್ಲಿ ಪ್ರದರ್ಶಿಸಬಾರದು ಎಂದು ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನಿರ್ಧಾರಕ್ಕೆ ಇದೀಗ ಫಿಲ್ಮ ಚೇಂಬರ್ ಅಧ್ಯಕ್ಷ ಸಾರಾ ಗೋವಿಂದು ಅವರು ಬೆಂಬಲ ಸೂಚಿಸಿದ್ದಾರೆ.


ಕಾವೇರಿ ನದಿ ನೀರು ಹಂಚಿಕೆ ವಿಚಾರದ ಕುರಿತಾಗಿ ಕರ್ನಾಟಕದ ವಿರುದ್ಧ ಹೇಳಿಕೆ ನೀಡುತ್ತಿರುವ ಕಮಲ್ ಹಾಸನ್ ಹಾಗೂ ರಜನಿ ಸಿನಿಮಾವನ್ನು ರಾಜ್ಯದಲ್ಲಿ ಪ್ರದರ್ಶಿಸಬಾರದೆಂದು ವಾಟಾಳ್ ನಾಗರಾಜ್ ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಜನಿಕಾಂತ್ ಅವರು ,’ ಸಿನಿಮಾ ಕರ್ನಾಟಕದಲ್ಲಿ ಪ್ರದರ್ಶನಗೊಳ್ಳುವ ಬಗ್ಗೆ ಚಿತ್ರದ ನಿರ್ಮಾಪಕರು ಹಾಗೂ ರಾಜ್ಯ ಸರ್ಕಾರದವರು ನೋಡಿಕೊಳ್ಳುತ್ತಾರೆ. ಸಿನಿಮಾ ಪ್ರದರ್ಶನವನ್ನು ನಿಷೇಧಿಸುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ತೆಗೆದುಕೊಳ್ಳುವುದಿಲ್ಲ ಎನ್ನುವ ನಂಬಿಕೆ ಇದೆ ಎಂದಿದ್ದರು.


ಆದರೆ ಇದೀಗ ಫಿಲ್ಮ ಚೇಂಬರ್ ಅಧ್ಯಕ್ಷ ಸಾರಾ ಗೋವಿಂದು ಅವರು,’ ನಾವು ಕಮಲ್ ಹಾಗೂ ರಜನಿ ಸಿನಿಮಾಗಳನ್ನು ರಾಜ್ಯದಲ್ಲಿ ಪ್ರದರ್ಶನ ಮಾಡಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದೇನೆ" ಎಂದು ಸ್ಪಷ್ಟನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ