ಇಳಿಯರಾಜರಿಂದ ಎಸ್‌.ಪಿ.ಬಾಲಸುಬ್ರಹ್ಮಣ್ಯಂಗೆ ಲೀಗಲ್ ನೋಟಿಸ್ ಜಾರಿ

ಭಾನುವಾರ, 19 ಮಾರ್ಚ್ 2017 (18:07 IST)
ಚಿತ್ರರಂಗದ ಇಬ್ಬರ ದಿಗ್ಗಜರ ನಡುವೆ ನಡೆಯುತ್ತಿರುವ ಜಟಾಪಟಿ ಅಭಿಮಾನಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ತಾವು ಸಂಯೋಜಿಸಿರುವ ಹಾಡುಗಳನ್ನು ಹಾಡಬಾರದು ಎಂದು ಖ್ಯಾತ ಸಂಗೀತ ನಿರ್ದೆಶಕ ಇಳಿಯರಾಜ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. 
ಅಮೆರಿಕ ಪ್ರವಾಸದಲ್ಲಿರುವ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಸಾಮಾಜಿಕ ಅಂತರ್ಜಾಲ ತಾಣವಾದ ಫೇಸ್‌‌ಬುಕ್‌ನಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿ  ತಮ್ಮ ಮತ್ತು ಇಳಿಯರಾಜ ನಡುವೆ ನಡೆಯುತ್ತಿರುವ ಜಟಾಪಟಿಯನ್ನು ಬಹಿರಂಗಗೊಳಿಸಿದ್ದಾರೆ.
 
ಇಳಿಯರಾಜ, ಎಸ್‌.ಪಿ.ಬಾಲಸುಬ್ರಮಣ್ಯಂ ಹಾಗೂ ಶ್ರೀಮತಿ ಚೈತ್ರ ಮತ್ತು ಚರಣ್ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿ ತಮ್ಮ ಅನುಮತಿಯಿಲ್ಲದೇ ತಾವು ಸಂಯೋಜಿಸಿರುವ ಹಾಡುಗಳನ್ನು ಹಾಡುವಂತಿಲ್ಲ. ಒಂದು ವೇಳೆ ಹಾಡಿದಲ್ಲಿ ದಂಡ ತೆರಬೇಕಾಗುತ್ತದೆ ಎಂದು ನೋಟಿಸ್‌ನಲ್ಲಿ ತಿಳಿಸಿದ್ದಾರೆ.
 
ಹಿನ್ನೆಲೆ ಗಾಯನದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಮಾಡಿರುವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಖ್ಯಾತ ಸಂಗೀತ ನಿರ್ದೇಶಕ ಇಳಿಯರಾಜ ಅವರ ಮಧ್ಯೆ ಎದುರಾಗಿರುವ ವಿರಸ ಅಭಿಮಾನಿಗಳಿಗೆ ಆಘಾತ ತಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ