ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕರಾಗಿರುವ ಪೊಗರು ಸಿನಿಮಾ ನಿರ್ಮಾಪಕ ಬಿಕೆ ಗಂಗಾಧರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ತೆರಿಗೆ ವಂಚನೆ ಆರೋಪದಡಿ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ನಿನ್ನೆ ಸಂಜೆ ಈ ದಾಳಿ ನಡೆದಿದೆ. ಮನೆ ಮಾತ್ರವಲ್ಲದೆ, ಗಾಂಧಿನಗರದಲ್ಲಿರುವ ಅವರ ಕಚೇರಿಯಲ್ಲೂ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.