Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Krishnaveni K

ಬುಧವಾರ, 28 ಮೇ 2025 (14:10 IST)
ಬೆಂಗಳೂರು: ಕನ್ನಡದ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ ನವರಸನಾಯಕ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. ಕನ್ನಡದ ಬಗ್ಗೆ ನೀವು ಹೇಳಿದ್ದೆಲ್ಲಾ ಒಪ್ಪಕ್ಕಾಗುವುದಿಲ್ಲ ಎಂದಿದ್ದಾರೆ.
 

ಥಗ್ಸ್ ಆಫ್ ಲೈಫ್ ಸಿನಿಮಾ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್ ಮುಂದೆಯೇ ಕಮಲ್ ಹಾಸನ್, ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದಿದ್ದರು. ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರ ಬಗ್ಗೆ ಕನ್ನಡ ಪರ ಸಂಘಟನೆಗಳು ಬೀದಿಗಳಿದು ಹೋರಾಟ ಆರಂಭಿಸಿವೆ.

ಇದರ ಬಗ್ಗೆ ಈಗ ಜಗ್ಗೇಶ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ‘ಕಲೆಗೆ ಜಾತಿ ಇಲ್ಲಾ ಎಲ್ಲಾ ಭಾಷೆಯ ಕಲಾವದರು ಶಾರದಾಸುತರು ಎಂದು ಒಪ್ಪುತ್ತೇವೆ. ಆ ನಿಟ್ಟಿನಲ್ಲಿ ಕಮಲ್ ಹಾಸನ್ ರನ್ನು ಮೆಚ್ಚಿದ್ದೇವೆ. ಅಂದ ಮಾತ್ರಕ್ಕೆ ಕನ್ನಡ ತಮಿಳಿಂದ ಹುಟ್ಟಿದೆ ಎಂಬ ಅವರ ಮಾತು ಒಪ್ಪೊಲ್ಲ. ಕನ್ನಡಕ್ಕೆ 2.5 ಸಾವಿರ ವರ್ಷದ ಇತಿಹಾಸವಿದೆ. ಅಷ್ಟೇಕೆ ಹನುಮದೇವರು ಕನ್ನಡ ಕಲಿಪುಂಗವ ಅವನ ಕಾಲ ರಾಮಾಯಣ ಇಷ್ಟು ಅರ್ಥವಾದರೆ ಸಾಕಲ್ಲವೆ ಸರ್’ ಎಂದಿದ್ದಾರೆ.

ಕಮಲ್ ಹಾಸನ್ ಹೇಳಿಕೆ ವಿರೋಧಿಸಿ ಚೇತನ್ ಅಹಿಂಸಾ ಬಿಟ್ಟರೆ ಜಗ್ಗೇಶ್ ಮಾತ್ರವೇ ಬಹಿರಂಗ ಹೇಳಿಕೆ ನೀಡಿದ್ದಾರೆ. ಕನ್ನಡದ ಬಗ್ಗೆ ತಪ್ಪಾದ ಹೇಳಿಕೆ ನೀಡಿರುವ ಕಮಲ್ ಹಾಸನ್ ಗೆ ಈಗ ಕರ್ನಾಟಕದಲ್ಲಿ ನಿಷೇಧದ ಭೀತಿ ಎದುರಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ