ಹಂಸಲೇಖ ವಿವಾದದ ಬಗ್ಗೆ ಜಗ್ಗೇಶ್ ಪರೋಕ್ಷ ಟಾಂಗ್
ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ ಆದರು ಆ ಮಾತು ಹೊಟ್ಟೆ ತುಂಬಿಸದು. ಮಾತು ಕೆಟ್ಟರೆ ಆ ಮೃಷ್ಟಾನ್ನವೇ ವಿಷವಾಗಿ ಅಜೀರ್ಣ ಆಗುವುದು. ಸಾಮಾಜಿಕ ಕ್ಷೇತ್ರ ಹಗ್ಗದ ಮೇಲಿನ ನಡಿಗೆ. ಪಡೆವುದು ಸುಲಭ. ಕಳೆದುಕೊಳ್ಳಲು ಕ್ಷಣ ಸಾಕು ಎಂದು ಜಗ್ಗೇಶ್ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.
ಆದರೆ ಜಗ್ಗೇಶ್ ಈ ಹೇಳಿಕೆ ಹಂಸಲೇಖ ಕುರಿತಾಗಿ ಎಂದು ನೆಟ್ಟಿಗರು ಅರ್ಥ ಮಾಡಿಕೊಂಡಿದ್ದಾರೆ. ಹಿಂದೆ ಪೇಜಾವರ ಶ್ರೀಗಳ ಜೊತೆ ಜಗ್ಗೇಶ್ ಇರುವ ಫೋಟೋ ಮೂಲಕ ಪ್ರತಿಕ್ರಿಯಿಸಿರುವ ನೆಟ್ಟಿಗರು ನಿಮ್ಮ ಮಾತು ಸರಿಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.