ಜೇಮ್ಸ್ ಎರಡನೇ ಹಾಡು ಬಿಡುಗಡೆಗೆ ಮುಹೂರ್ತ ಫಿಕ್ಸ್

ಮಂಗಳವಾರ, 8 ಮಾರ್ಚ್ 2022 (11:12 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾದ ಎರಡನೇ ಹಾಡು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

ಸಿನಿಮಾ ಮಾರ್ಚ್ 17 ರಂದು ಬಿಡುಗಡೆಯಾಗಲಿದ್ದು, ಈಗಾಗಲೇ ಪ್ರಚಾರ ಕಾರ್ಯ ಶುರುವಾಗಿದೆ. ಕಳೆದ ವಾರವಷ್ಟೇ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು.

ಇದೀಗ ಎರಡನೇ ಹಾಡು ಮಾರ್ಚ್ 11 ರಂದು ಬೆಳಿಗ್ಗೆ 11.11 ಕ್ಕೆ ಪಿಆರ್ ಕೆ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಹೀಗಾಗಿ ಅಭಿಮಾನಿಗಳೂ ಕಾತುರದಿಂದ ಕಾಯುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ