ಅಭಿಮಾನಿಯ ಸಾವಿನ ತನಿಖೆಗೆ ಒತ್ತಾಯಿಸಿದ ಜ್ಯೂ.ಎನ್ ಟಿಆರ್

ಮಂಗಳವಾರ, 27 ಜೂನ್ 2023 (16:23 IST)

ಹೈದರಾಬಾದ್: ಟಾಲಿವುಡ್ ಸ್ಟಾರ್ ಜ್ಯೂ.ಎನ್ ಟಿಆರ್ ಕಟ್ಟಾ ಅಭಿಮಾನಿ ಶ್ಯಾಮ್ ಸೋಮವಾರ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

ಅವರದ್ದು ಆತ್ಮಹತ್ಯೆಯೋ, ಕೊಲೆಯೋ ಎಂಬ ಬಗ್ಗೆ ಚರ್ಚೆ ನಡೆದಿದೆ. ಕುಟುಂಬಸ್ಥರು ಮತ್ತು ಆಪ್ತರು ಇದು ಆತ್ಮಹತ್ಯೆಯಲ್ಲ ಕೊಲೆ ಎಂದಿದ್ದಾರೆ. ಹೀಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ನಡುವೆ ಅಭಿಮಾನಿಯ ಸಾವಿಗೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಜ್ಯೂ.ಎನ್ ಟಿಆರ್, ಸಾವಿನ ಬಗ್ಗೆ ಸೂಕ್ತ ತನಿಖೆಯಾಗಿ ಸತ್ಯಾಂಶ ಹೊರಬರಲಿ ಎಂದಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ