ಕಾಟೇರ ಸಿನಿಮಾದ ಬಿಗ್ ಅಪ್ ಡೇಟ್ ಇಂದು: ಟ್ರೆಂಡ್ ಶುರು ಮಾಡಿಕೊಂಡ ಡಿಬಾಸ್ ಫ್ಯಾನ್ಸ್

ಬುಧವಾರ, 13 ಡಿಸೆಂಬರ್ 2023 (09:20 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾದ ಬಿಗ್ ಅಪ್ ಡೇಟ್ ಒಂದು ಇಂದು ಸಿಗುವ ನಿರೀಕ್ಷೆಯಿದೆ.

ಡಿಸೆಂಬರ್ 29 ರಂದು ಕಾಟೇರ ಸಿನಿಮಾ ಥಿಯೇಟರ್ ಗಳಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಅಭಿಮಾನಿಗಳು ಕಾಟೇರ ಸಿನಿಮಾಗಾಗಿ ಕಾದು ಕುಳಿತಿದ್ದಾರೆ.

ಚಿತ್ರತಂಡ ಇದುವರೆಗೆ ಎರಡು ಹಾಡುಗಳನ್ನು ಬಿಡುಗಡೆ ಮಾಡಿದೆ. ಆದರೆ ಎಲ್ಲರೂ ಎದಿರು ನೋಡುತ್ತಿರುವುದು ಕಾಟೇರ ಸಿನಿಮಾದ ಟ್ರೈಲರ್ ಗಾಗಿ. ಟ್ರೈಲರ್ ಬಿಡುಗಡೆ ಯಾವಾಗ ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗುವ ನಿರೀಕ್ಷೆಯಿದೆ. ಇಂದು ಕಾಟೇರ ತಂಡ ಟ್ರೈಲರ್ ಬಿಡುಗಡೆ ದಿನಾಂಕ ಪ್ರಕಟಿಸಬಹುದು ಎಂದು ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಈಗಾಗಲೇ ಸೋಷಿಯಲ್ ಮೀಡಿಯಾದಲ್ಲೂ ಕಾಟೇರ ಟ್ರೆಂಡ್ ಶುರು ಮಾಡಿದ್ದಾರೆ.

ತರುಣ್ ಸುಧೀರ್ ನಿರ್ದೇಶನದ ಕಾಟೇರ ಸಿನಿಮಾದಲ್ಲಿ ದರ್ಶನ್ ಗೆ ನಾಯಕಿಯಾಗಿ ಮಾಲಾಶ್ರೀ ಪುತ್ರಿ ಆರಾಧನಾ ಅಭಿನಯಿಸಿದ್ದಾರೆ. ಅವರಿಗೆ ಇದು ಚೊಚ್ಚಲ ಸಿನಿಮಾ. ರಾಬರ್ಟ್ ನಂತಹ ಹಿಟ್ ಸಿನಿಮಾ ಕೊಟ್ಟಿದ್ದ ತರುಣ್ ಮತ್ತು ದರ್ಶನ್ ಕಾಂಬಿನೇಷನ್ ನ ಮಾಸ್ ಎಂಟರ್ ಟೈನರ್ ಸಿನಿಮಾವಿದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ