ದೀಪಾವಳಿ ಹಬ್ಬಕ್ಕೆ ಕಾಟೇರ ಹೊಸ ಪೋಸ್ಟರ್ ಅನಾವರಣ

ಭಾನುವಾರ, 12 ನವೆಂಬರ್ 2023 (09:38 IST)
Photo Courtesy: Twitter
ಬೆಂಗಳೂರು: ದೀಪಾವಳಿ ಹಬ್ಬದ ನಿಮಿತ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ದರ್ಶನ್ ಈ ಪೋಸ್ಟರ್ ನಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಸಖತ್ ಹ್ಯಾಂಡ್ಸಮ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯದಲ್ಲೇ ಚಿತ್ರದ ಅಡಿಯೋ ಬಿಡುಗಡೆಯಾಗಲಿದೆ ಎಂಬ ಮಾಹಿತಿಯನ್ನು ಚಿತ್ರನಿರ್ದೇಶಕ ತರುಣ್ ಸುಧೀರ್ ತಿಳಿಸಿದ್ದಾರೆ.

ಕಾಟೇರ ಔಟ್ ಆಂಡ್ ಔಟ್ ಮಾಸ್ ಸಿನಿಮಾವಾಗಿದ್ದು, ಮಾಲಾಶ್ರೀ ಪುತ್ರಿ ರಾಧನಾ ಮೊದಲ ಬಾರಿಗೆ ಈ ಸಿನಿಮಾ ಮೂಲಕ ಹೀರೋಯಿನ್ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ