ಪೊಲೀಸ್ ಸಿಬ್ಬಂದಿಯನ್ನು ಪ್ರಶಂಸಿಸಿದ ಕಮಲ್ ಪಂತ್

ಭಾನುವಾರ, 31 ಅಕ್ಟೋಬರ್ 2021 (09:33 IST)
ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಪೊಲೀಸ್ ಸಿಬ್ಬಂದಿಯನ್ನು ಪ್ರಶಂಸಿಸಿದ್ದಾರೆ. ಹಗಲು-ರಾತ್ರಿ ಎನ್ನದೆ ಪೊಲೀಸರು ಕರ್ತವ್ಯ ನಿರ್ವಹಿಸಿದ್ದರು.
ನಟ ಪುನೀತ್ ಅಂತಿಮ ದರ್ಶನ, ಅಂತಿಮ ಯಾತ್ರೆ, ಅಂತ್ಯಕ್ರಿಯೆಯ ವೇಳೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಕರ್ತವ್ಯ ನಿರ್ವಹಿಸಿದ್ದರು. ಪೊಲೀಸರ ಕರ್ತವ್ಯ ಮೆಚ್ಚಿ ಪಂತ್ ಧನ್ಯವಾದ ತಿಳಿಸಿದ್ದಾರೆ. ಸಿಬ್ಬಂದಿಯ ಕೈ ಕುಲುಕಿ ಅವರು ಪ್ರಶಂಸಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ