ಡಿ.31 ಬಂದ್: ಕನ್ನಡ ಸಿನಿಮಾ ರಿಲೀಸ್ ಮಾಡದಂತೆ ಎಚ್ಚರಿಕೆ

ಸೋಮವಾರ, 27 ಡಿಸೆಂಬರ್ 2021 (19:41 IST)
ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31 ರಂದು ಕನ್ನಡ ಸಂಘಟನೆಗಳು ನೀಡಿದ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಡಿಸೆಂಬರ್ 31 ರಂದು ಕೆಲವು ಕನ್ನಡ ಸಿನಿಮಾಗಳು ರಿಲೀಸ್ ಆಗಲಿವೆ. ಹೀಗಾಗಿ ಚಿತ್ರರಂಗದ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಇದೀಗ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31 ರಂದು ಸಿನಿಮಾ ರಿಲೀಸ್ ಮಾಡದಂತೆ ಎಚ್ಚರಿಕೆ ನೀಡಿವೆ.

ಒಂದು ವೇಳೆ ಸಿನಿಮಾ ರಿಲೀಸ್ ಮಾಡಿದರೆ ಥಿಯೇಟರ್ ಗೆ ಮುತ್ತಿಗೆ ಹಾಕುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಕರ್ನಾಟಕ ಬಂದ್ ಗೆ ಚಲನಚಿತ್ರ ವಾಣಿಜ್ಯ ಮಂಡಳಿ ನೈತಿಕ ಬೆಂಬಲ ಸೂಚಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ