Shridhar Nayak: ಕನ್ನಡ ಕಿರುತೆರೆಯ ಖ್ಯಾತ ನಟ ಶ್ರೀಧರ್ ನಾಯಕ್ ಇನ್ನಿಲ್ಲ
ಕಳೆದ ಕೆಲವು ದಿನಗಳಿಂದಲೂ ಅವರು ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಅನಾರೋಗ್ಯದಿಂದಾಗಿ ಅವರು ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದಲೂ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಶ್ರೀಧರ್ ಸಾವನ್ನಪ್ಪಿದ್ದಾರೆ.
ಅನಾರೋಗ್ಯದಿಂದಾಗಿ ಶ್ರೀಧರ್ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಹೀಗಾಗಿ ಧನ ಸಹಾಯ ಮಾಡುವಂತೆ ಸೋಷಿಯಲ್ ಮೀಡಿಯಾಗಳಲ್ಲಿ ಅವರ ಹಿತೈಷಿಗಳು ಮನವಿ ಮಾಡಿದ್ದರು. ಕೆಲವು ದಾನಿಗಳು ತಕ್ಕಮಟ್ಟಿಗೆ ಧನ ಸಹಾಯವನ್ನೂ ಮಾಡಿದ್ದರು.
ಆದರೆ ಇದು ಯಾವುದೂ ಅವರ ಅನಾರೋಗ್ಯ ತಡೆಯಲು ಸಾಧ್ಯವಾಗಿಲ್ಲ. ಕನ್ನಡದ ಪಾರು, ವಧು ಧಾರವಾಹಿಗಳಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದಿದ್ದರು. ಇತ್ತೀಚೆಗೆ ಅನಾರೋಗ್ಯದಿಂದಾಗಿ ಗುರುತೇ ಸಿಗದಷ್ಟು ಬದಲಾಗಿದ್ದರು.