ತಾಯಿಯಾಗ್ತಿದ್ದಾರೆ ಖ್ಯಾತ ಕಿರುತೆರೆ ನಟಿ ಆಶಿತಾ ಚಂದ್ರಪ್ಪ

ಸೋಮವಾರ, 28 ಆಗಸ್ಟ್ 2023 (16:27 IST)
Photo Courtesy: Instagram
ಬೆಂಗಳೂರು: ಕಿರುತೆರೆಯಲ್ಲಿ ತನ್ನದೇ ಅಭಿಮಾನಿ ವರ್ಗದವರನ್ನು ಹೊಂದಿದ್ದ ಖ್ಯಾತ ನಟಿ ಆಶಿತಾ ಚಂದ್ರಪ್ಪ ಮದುವೆ ಬಳಿಕ ಬಣ್ಣದ ಲೋಕದಿಂದ ದೂರವೇ ಉಳಿದಿದ್ದರು.
 

ಇದೀಗ ಆಶಿತಾ ತಮ್ಮ ವೈಯಕ್ತಿಕ ಜೀವನದ ಸಿಹಿ ಸುದ್ದಿಯೊಂದನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಆಶಿತಾ ದಂಪತಿ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಸೀಮಂತದ ಫೋಟೋವೊಂದನ್ನು ಆಶಿತಾ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

2021 ರಲ್ಲಿ ಆಶಿತಾ ಉದ್ಯಮಿ ರೋಹನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ