ಬೆಂಗಳೂರು: ನಟ ರಿಷಭ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಇಂದು ವಿಶ್ವದಾದ್ಯಂತ 7 ಸಾವಿರಕ್ಕೂ ಅಧಿಕ ತೆರೆಗಳಲ್ಲಿ ಬಿಡುಗಡೆಯಾಗಿದೆ. ಇದಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಿನಿಮಾ ಮೂಡಿಬಂದ ರೀತಿ ಹಾಗೂ ಅದಕ್ಕೆ ಪ್ರೇಕ್ಷಕರಿಂದ ಸಿಗುತ್ತಿರುವ ಮೆಚ್ಚುಗೆ ಕಂಡು ರಿಷಬ್ ಶೆಟ್ಟಿ ಅವರ ಪತ್ನಿ ಭಾವುಕರಾಗಿದ್ದಾರೆ. ಈ ಸಿನಿಮಾಕ್ಕಾಗಿ ರಿಷಭ್ ಶೆಟ್ಟಿ ಅವರೊಂದಿಗೆ ಪ್ರಗತಿ ಶೆಟ್ಟಿ ಅವರೂ ಜೈಕೋಡಿಸಿದ್ದಾರೆ.
ಸಿನಿಮಾ ಪ್ರದರ್ಶನದ ಸಮಯದಲ್ಲಿ ರಿಷಬ್ ಶೆಟ್ಟಿ ಅವರ ಪತ್ನಿ, ನಟ-ವಿನ್ಯಾಸಕಿ ಪ್ರಗತಿ ಶೆಟ್ಟಿ, ಚಿತ್ರಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ನೋಡಿ ಕಣ್ಣೀರು ಹಾಕಿದರು. ಆಗ ಪತ್ನಿಯನ್ನು ಅಪ್ಪಿಕೊಂಡು ರಿಷಭ್ ಸಮಾಧಾನಪಡಿಸಿದರು.
ವಿಶ್ವದಾದ್ಯಂತ ಕಾಂತಾರ ಚಾಪ್ಟರ್ 1 ಸಿನಿಮಾ ರಿಲೀಸ್ ಆಗಿದೆ. ಎಲ್ಲೆಡೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ರಿಷಬ್ ತಮ್ಮ ಚಿತ್ರದಲ್ಲಿ ಕೆಲಸ ಮಾಡಿದ ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರೇಕ್ಷಕರು ಅವರೆಲ್ಲರಿಗೂ ಹರ್ಷೋದ್ಗಾರದ ಮೂಲಕ ಅಭಿನಂದನೆ ವ್ಯಕ್ತಪಡಿಸಿದ್ದಾರೆ. ರಿಷಬ್ ಜೊತೆಗೆ ಚಿತ್ರದಲ್ಲಿ ರುಕ್ಮಿಣಿ ವಸಂತ್, ಜಯರಾಮ್ ಮತ್ತು ಗುಲ್ಶನ್ ದೇವಯ್ಯ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.