ಕೊನೆಗೂ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿದ ಸರ್ಕಾರ: ಇಂದು ಅಧಿಕೃತ ಆದೇಶ
ಗುರುವಾರ, 4 ಫೆಬ್ರವರಿ 2021 (09:04 IST)
ಬೆಂಗಳೂರು: ಥಿಯೇಟರ್ ಗಳಲ್ಲಿ ಶೇ.50 ರಷ್ಟು ಮಾತ್ರ ಸೀಟು ಭರ್ತಿಗೆ ಅವಕಾಶ ನೀಡಿದ್ದ ಸರ್ಕಾರದ ತಾರತಮ್ಯ ನೀತಿ ವಿರುದ್ಧ ಸಿಡಿದೆದ್ದ ಸ್ಯಾಂಡಲ್ ವುಡ್ ಗೆ ಕೊನೆಗೂ ಸರ್ಕಾರ ಮಣಿದಿದೆ.
ನಿನ್ನೆ ಸಂಜೆ ನಟ ಶಿವರಾಜ್ ಕುಮಾರ್, ತಾರಾ ಅನುರಾಧ ಸೇರಿದಂತೆ ಚಿತ್ರರಂಗದ ಗಣ್ಯರು ಸಚಿವ ಡಾ. ಸುಧಾಕರ್ ಜೊತೆಗೆ ಸಭೆ ನಡೆಸಿದ್ದು, ಈ ಸಭೆ ಬಳಿಕ ಸಚಿವರು ಶೇ.100 ಸೀಟು ಭರ್ತಿಗೆ ಅವಕಾಶ ನೀಡುವುದಾಗಿ ಹೇಳಿದ್ದಾರೆ. ಆದರೆ ಕೆಲವೊಂದು ಮಾರ್ಗಸೂಚಿಗಳನ್ನು ಅನುಸರಿಸಬೇಕಾಗುತ್ತದೆ. ಹೀಗಾಗಿ ಇಂದು ಮಾರ್ಗಸೂಚಿ ಜೊತೆಗೆ ಅಧಿಕೃತ ಆದೇಶ ಹೊರಬೀಳಲಿದೆ.