ನವಂಬರ್ 1 ರಂದು ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ

ಶುಕ್ರವಾರ, 5 ಆಗಸ್ಟ್ 2022 (16:15 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅಗಲಿದ ನಟನಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದರು.

ಆದರೆ ಇದುವರೆಗೆ ಪ್ರಶಸ್ತಿ ಪ್ರಧಾನ ಮಾಡಿರಲಿಲ್ಲ. ಇದೀಗ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನಕ್ಕೆ ದಿನ ನಿಗದಿಯಾಗಿದ್ದು, ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಈ ವರ್ಷ ನವಂಬರ್ 1 ರಂದು ಅಂದರೆ ರಾಜ್ಯೋತ್ಸವದ ದಿನದಂದು ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಇದು ಅಭಿಮಾನಿಗಳ ಸಂತೋಷಕ್ಕೆ ಕಾರಣವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ