2014-15ನೇ ಕ್ಯಾಲೆಂಡಲ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷ ಭಾಷಣದಲ್ಲಿ ಮುಖ್ಯಮಂತ್ರಿಯವರು, ಇನ್ನು ಮುಂದೆ ಪ್ರತಿವರ್ಷ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವರನಟ ಡಾ.ರಾಜ್‍ಕುಮಾರ್ ಅವರ ಜನ್ಮದಿನವಾದ ಏಪ್ರಿಲ್ 24ರಂದು ಏರ್ಪಡಿಸಲಾಗುವುದೆಂದು ಘೋಸಿಸಿದ್ದಾರೆ.
ಡಾ.ರಾಜ್ ಕುಮಾರ್ ಅವರು ಕನ್ನಡ ಚಲನಚಿತ್ರೋದ್ಯಮಕ್ಕೆ ನೀಡಿರುವ ಕೊಡುಗೆ ಅವಿಸ್ಮರಣೀಯವಾದ್ದರಿಂದ, ಅವರ ಜನ್ಮದಿನಾಚರಣೆ ಅಚರಿಸುವ ಏಪ್ರಿಲ್ 24ರಂದು ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಲು ಉದ್ದೇಶಿಸಿರುವುದಾಗಿ ಈ ಮೇರೆಗೆ ಆದೇಶಿಸಲಾಗಿದೆ.