ಹಾಲಿವುಡ್ ನಲ್ಲೂ ಬಿಡುಗಡೆಯಾಗಲಿದೆ ಕೆಜಿಎಫ್ 2!

ಮಂಗಳವಾರ, 22 ಫೆಬ್ರವರಿ 2022 (09:00 IST)
ಬೆಂಗಳೂರು: ಕನ್ನಡ ಚಿತ್ರರಂಗವನ್ನು ದೇಶವೇ ತಿರುಗಿ ನೋಡುವಂತೆ ಮಾಡಿದ ಕೆಜಿಎಫ್ ಸಿನಿಮಾ ಈಗ ಮತ್ತೊಂದು ಮೈಲಿಗಲ್ಲು ಸೃಷ್ಟಿಸಲು ಹೊರಟಿದೆ.

ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಕೆಜಿಎಫ್ 2 ಸಿನಿಮಾ ಹಾಲಿವುಡ್ ನಲ್ಲೂ ಬಿಡುಗಡೆಯಾಗಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ.

ಹೊಂಬಾಳೆ ಫಿಲಂಸ್ ನಿರ್ಮಿಸಿರುವ ಪ್ರಶಾಂತ್ ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಕೆಜಿಎಫ್ 2 ಏಪ್ರಿಲ್ 14 ರಂದು ಬಿಡುಗಡೆಯಾಗಲಿದೆ. ಇದು ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ. ಇದರ ಜೊತೆಗೆ ಈಗ ಹಾಲಿವುಡ್ ನಲ್ಲೂ ಬಿಡುಗಡೆಯಾಗಲಿದೆ ಎಂಬ ಸುದ್ದಿಯಿದೆ. ಇದು ಕನ್ನಡ ಚಿತ್ರದ ಮಟ್ಟಿಗೆ ಹೆಗ್ಗಳಿಕೆಯೇ ಸರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ