ಕೆಜಿಎಫ್ 2 ಸೆಟ್ ನಿಂದ ಫೋಟೋಗಳು ಲೀಕ್

ಶನಿವಾರ, 10 ಅಕ್ಟೋಬರ್ 2020 (09:41 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ಮಂಗಳೂರಿನ ಕಡಲ ಕಿನಾರೆಯಲ್ಲಿ ನಡೆಯುತ್ತಿದೆ. ಮಲ್ಪೆ ಬೀಚ್ ನಲ್ಲಿ ವಿಶೇಷ ಸೆಟ್ ಹಾಕಿ ಚಿತ್ರತಂಡ ಚಿತ್ರೀಕರಣ ನಡೆಸುತ್ತಿದೆ.


ರಾಕಿಂಗ್ ಸ್ಟಾರ್ ಯಶ್, ನಾಯಕಿ ಶ್ರೀನಿಧಿ ಶೆಟ್ಟಿ ಮುಂತಾದವರು ಪಾಲ್ಗೊಂಡಿದ್ದಾರೆ. ಈ ನಡುವೆ ಕೆಜಿಎಫ್ ಸೆಟ್ ನ ಹಲವು ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿವೆ. ಇದರ ನಡುವೆ ನಿರ್ದೇಶಕ ಪ್ರಶಾಂತ್ ನೀಲ್ ಕೂಡಾ ಯಶ್ ಗೆ ನಿರ್ದೇಶಿಸುತ್ತಿರುವ ಫೋಟೋವೊಂದನ್ನು ಪ್ರಕಟಿಸಿದ್ದು, ಮುಂದಿನ ಹಂತದ ಚಿತ್ರೀಕರಣ ಬೆಂಗಳೂರು ಮತ್ತು ಹೈದರಾಬಾದ್ ನಲ್ಲಿ ಎಂದು ಬರೆದುಕೊಂಡಿದ್ದಾರೆ. ಇನ್ನು, ಕೆಜಿಎಫ್ 2 ನ ಫೋಟೋಗಳನ್ನು ನೋಡಿ ಅಭಿಮಾನಿಗಳು ಖುಷಿಪಡುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ