ನಾಳೆ ಕೆಜಿಎಫ್ 2 ರಿಲೀಸ್ ಡೇಟ್ ಘೋಷಣೆ

ಗುರುವಾರ, 15 ಜುಲೈ 2021 (12:57 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾ ಎಲ್ಲವೂ ರಿಲೀಸ್ ಡೇಟ್ ಯಾವಾಗ ಎಂಬ ಪ್ರಶ್ನೆಗೆ ನಾಳೆ ಉತ್ತರ ಸಿಗುವ ನಿರೀಕ್ಷೆಯಿದೆ.


ಸಿನಿಮಾ ಬಿಡುಗಡೆ ಬಗ್ಗೆ ಅನೇಕ ಸುದ್ದಿಗಳು ಓಡಾಡುತ್ತಲೇ ಇವೆ. ನಾಳೆ ಚಿತ್ರತಂಡ ಪಕ್ಕಾ ಡೇಟ್ ಅನೌನ್ಸ್ ಮಾಡುವ ಮೂಲಕ ಇದಕ್ಕೆ ಅಂತ್ಯ ಹಾಡುವ ನಿರೀಕ್ಷೆಯಿದೆ.

ನಾಳೆ ಚಿತ್ರತಂಡ ರಿಲೀಸ್ ಡೇಟ್ ಘೋಷಣೆ ಮಾಡಬಹುದು ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳು ಈಗಲೇ ಕಾತುರದಿಂದ ಕಾಯುತ್ತಿದ್ದಾರೆ. ಲಾಕ್ ಡೌನ್ ಕಾರಣದಿಂದ ಚಿತ್ರ ಬಿಡುಗಡೆ ಮುಂದೂಡಿಕೆಯಾಗಿತ್ತು. ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾಗಬಹುದು ಎಂಬ ನಿರೀಕ್ಷೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ