ಕೊನೆಗೂ 200 ಕೋಟಿ ಕ್ಲಬ್ ಸೇರಿದ ಕೆಜಿಎಫ್: ಸ್ಯಾಂಡಲ್ ವುಡ್ ನ ಹೊಸ ದಾಖಲೆ
ಭಾನುವಾರ, 13 ಜನವರಿ 2019 (09:08 IST)
ಬೆಂಗಳೂರು: ಕೆಜಿಎಫ್ ಸಿನಿಮಾ ಅಬ್ಬರ ನೋಡಿದಾಗಲೇ ಈ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಬರೆಯುವುದು ಖಾತ್ರಿ ಮಾಡಿತ್ತು. ಅದೀತ ನಿಜವಾಗಿದೆ.
ಕೆಜಿಎಫ್ ಸಿನಿಮಾ ವಿಶ್ವದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಿ ಈಗ ಯಶಸ್ವೀ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, 200 ಕೋಟಿ ಗಳಿಕೆ ಮಾಡಿದೆ. ಈ ಮೂಲಕ 200 ಕೋಟಿ ಗಳಿಕೆ ಮಾಡಿದ ಮೊದಲ ಕನ್ನಡ ಸಿನಿಮಾ ಎಂಬ ದಾಖಲೆಗೆ ಪಾತ್ರವಾಗಿದೆ.
ಕನ್ನಡ ಮಾತ್ರವಲ್ಲ, ಬೇರೆ ಭಾಷೆಗಳಲ್ಲೂ ಸಿನಿಮಾ ಸೂಪರ್ ಹಿಟ್ ಆಗಿದೆ. ಹಿಂದಿ ಭಾಷೆಯೊಂದರಲ್ಲೇ ಕಲೆಕ್ಷನ್ 50 ಕೋಟಿ ತಲುಪಿರುವುದು ವಿಶೇಷ. ಇನ್ನು, ಭಾರತದಲ್ಲಿ ಮಾತ್ರವಲ್ಲ, ಅಮೆರಿಕಾ, ಬ್ರಿಟನ್ ನಲ್ಲೂ ಕೆಜಿಎಫ್ ಸೂಪರ್ ಹಿಟ್ ಲಿಸ್ಟ್ ಗೆ ಸೇರಿದೆ. ಇತ್ತೀಚೆಗೆ ಪಾಕಿಸ್ತಾನದಲ್ಲೂ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ