ಹೆಣ್ಣು ಮಗುವಿಗೆ ಜನ್ಮನೀಡಿದ ಕಿಯಾರಾ ಅಡ್ವಾಣಿ: ಬಾಲಿವುಡ್‌ನ ಸ್ಟಾರ್‌ ಜೋಡಿ ಮನೆಯಲ್ಲಿ ಸಂಭ್ರಮ

Sampriya

ಬುಧವಾರ, 16 ಜುಲೈ 2025 (14:20 IST)
Photo Credit X
ಮುಂಬೈ: ಬಾಲಿವುಡ್‌ನ ಸ್ಟಾರ್‌ ಜೋಡಿಯಾದ  ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್‌ ಮಲ್ಹೋತ್ರಾ ಅವರ ಮನೆಗೆ ಮಹಾಲಕ್ಷಿಯ ಆಗಮನವಾಗಿದೆ. ಕಿಯಾರಾ ಅವರು ಹೆಣ್ಣು ಮಗುವಿಗೆ ಜನ್ಮನೀಡಿದ್ದಾರೆ.

ಈ ಸಿಹಿ ಸುದ್ದಿಯನ್ನು ಕಿಯಾರಾ–ಸಿದ್ಧಾರ್ಥ್‌ ದಂಪತಿ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. 

ಕಿಯಾರಾ ಹಾಗೂ ಸಿದ್ಧಾರ್ಥ್‌ ದಂಪತಿ ಫೆಬ್ರವರಿಯಲ್ಲಿ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಹೇಳಿಕೊಂಡಿದ್ದರು. ಇದೀಗ ಈ ದಂಪತಿ ತಂದೆ-ತಾಯಿಯಾಗಿ ಬಡ್ತಿ ಪಡೆದಿದ್ದಾರೆ.

ನಟಿಗೆ ಆಗಸ್ಟ್‌ನಲ್ಲಿ ಮಗು ಜನಿಸಬೇಕಿತ್ತು. ಆದರೆ ಮಗು ಬೇಗನೆ ಜನಿಸಿದೆ. ಕಿಯಾರಾಳನ್ನು ಹೆರಿಗೆಗಾಗಿ ಮುಂಬೈನ ಗಿರ್ಗಾಂವ್ ಪ್ರದೇಶದ ಹೆಚ್‌ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಿಯಾರಾ ಪ್ರೆಗ್ನೆನ್ಸಿ ಘೋಷಿಸಿದಾಗಿನಿಂದ, ಕಿಯಾರಾ ಮತ್ತು ಸಿದ್ಧಾರ್ಥ್‌ ಸೋಷಿಯಲ್‌ ಮೀಡಿಯಾದಲ್ಲಿ ಅಷ್ಟೇನು ಆಕ್ಟೀವ್‌ ಆಗಿರಲಿಲ್ಲ. ಫೆಬ್ರವರಿ 28 ರಂದು, ಸಿದ್ಧಾರ್ಥ್ ಮತ್ತು ಕಿಯಾರಾ ಇನ್ಸ್ಟಾಗ್ರಾಮ್‌ನಲ್ಲಿ ‘ನಮ್ಮ ಜೀವನದ ಶ್ರೇಷ್ಠ ಉಡುಗೊರೆ ಶೀಘ್ರದಲ್ಲೇ ಬರಲಿದೆ’ ಎಂದು ಪೋಸ್ಟ್ ಮಾಡಿದ್ದರು.

ಕಿಯಾರಾ ಮತ್ತು ಸಿದ್ಧಾರ್ಥ್‌ರ ಲವ್‌ ಸ್ಟೋರಿ ಶೇರ್‌ಶಾಹ್‌ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಶುರುವಾಗಿತ್ತು. ಈ ಚಿತ್ರದಲ್ಲಿ ಕಿಯಾರಾ, ಸಿದ್ದಾರ್ಥ್‌ ಅವರ ಗೆಳತಿಯ ಪಾತ್ರವನ್ನು ನಿರ್ವಹಿಸಿದ್ದರು, ಮತ್ತು ಚಿತ್ರೀಕರಣದ ವೇಳೆ ಇವರಿಬ್ಬರ ನಡುವೆ ಪ್ರೀತಿ ಹುಟ್ಟಿತು. ಕೆಲವು ವರ್ಷಗಳ ಡೇಟಿಂಗ್‌ನ ನಂತರ, 2023ರ ಫೆಬ್ರವರಿ 7ರಂದು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ವಿವಾಹವಾದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ