ಕಿಚ್ಚ ಸುದೀಪ್ ಕೋಟಿಗೊಬ್ಬ 3 ಟೀಸರ್ ಇಂದು

ಶುಕ್ರವಾರ, 21 ಫೆಬ್ರವರಿ 2020 (08:51 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾದ ಟೀಸರ್ ಇಂದು ಲಾಂಚ್ ಆಗುತ್ತಿದೆ. ಮಹಾಶಿವರಾತ್ರಿ ದಿನ ಬಿಡುಗಡೆ ಮಾಡುವುದಾಗಿ ಈ ಮೊದಲೇ ಚಿತ್ರತಂಡ ಘೋಷಿಸಿತ್ತು.


ಅದರಂತೆ ಇಂದು ಮಧ್ಯಾಹ್ನ 12.01 ಕ್ಕೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಕೋಟಿಗೊಬ್ಬ 3 ಟೀಸರ್ ಬಿಡುಗಡೆಯಾಗಲಿದೆ.

ಇದು ಕಿಚ್ಚ ಸುದೀಪ್ ಅಭಿನಯದ ಈ ವರ್ಷದ ಮೊದಲ ಸಿನಿಮಾವಾಗಲಿದೆ. ಹೀಗಾಗಿ ಅಭಿಮಾನಿಗಳು ಭರ್ಜರಿ ಓಪನಿಂಗ್ ನಿರೀಕ್ಷೆ ಮಾಡುತ್ತಿದ್ದಾರೆ. ಈಗಾಗಲೇ ಈ ಸಿನಿಮಾದಲ್ಲಿ ಕಿಚ್ಚನ ಸ್ಟೈಲಿಶ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ