‘ಪೈಲ್ವಾನ್’ ಬಗ್ಗೆ ಹೊಸ ಸುದ್ದಿ ಕೊಟ್ಟ ಕಿಚ್ಚ ಸುದೀಪ್

ಸೋಮವಾರ, 7 ಜನವರಿ 2019 (09:33 IST)
ಬೆಂಗಳೂರು: ಕಿಚ್ಚ ಸುದೀಪ್ ಬಹುನಿರೀಕ್ಷಿತ ಪೈಲ್ವಾನ್ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಈಗಾಗಲೇ ಎಲ್ಲರಿಗೂ ಗೊತ್ತಿರುವ ವಿಚಾರವೇ. ಈ ಸಿನಿಮಾ ಬಗ್ಗೆ ಈಗಾಗಲೇ ಸೋಷಿಯಲ್ ಮೀಡಿಯಾಗಳಲ್ಲಿ ಹೈಪ್ ಕ್ರಿಯೇಟ್ ಆಗಿದೆ.


ಈಗ ಪೈಲ್ವಾನ್ ಬಗ್ಗೆ ಕಿಚ್ಚ ಹೊಸ ಸುದ್ದಿಯೊಂದನ್ನು ಬಿಟ್ಟುಕೊಟ್ಟಿದ್ದಾರೆ. ಪೈಲ್ವಾನ್ ಸಿನಿಮಾ ಟೀಸರ್ ಬಿಡುಗಡೆ ಯಾವಾಗ ಎಂಬುದನ್ನು ಸುದೀಪ್ ಟ್ವಿಟರ್ ಮೂಲಕ ಬಹಿರಂಗಪಡಿಸಿದ್ದಾರೆ.

ಪೈಲ್ವಾನ್‍ ಕನ್ನಡ ಅವತರಣಿಕೆಯ ಮೊದಲ ಅಧಿಕೃತ ಟೀಸರ್ ಜನವರಿ 15 ರಂದು ಸಂಜೆ 4.45 ಕ್ಕೆ ಬಿಡುಗಡೆಯಾಗುತ್ತಿದೆ. ಇಡೀ ತಂಡಕ್ಕೆ ನನ್ನ ಅಭಿನಂದನೆಗಳು ಎಂದು ಸುದೀಪ್ ಟ್ವೀಟ್ ಮುಖೇನ ಟೀಸರ್ ಬಿಡುಗಡೆ ದಿನಾಂಕ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ