ಕಿಚ್ಚ ಸುದೀಪ್ ಬರ್ತ್ ಡೇ ಸಿಡಿಪಿ ಬಿಡುಗಡೆ ಮಾಡಿದ ಶಿವರಾಜ್ ಕುಮಾರ್

ಶನಿವಾರ, 27 ಆಗಸ್ಟ್ 2022 (18:32 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಿಡಿಪಿಯನ್ನು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅನಾವರಣಗೊಳಿಸಿದ್ದಾರೆ.

ಸುದೀಪ್ ಸೆಪ್ಟೆಂಬರ್ 2 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅಭಿಮಾನಿಗಳಿಗಾಗಿ ವಿಶೇಷ ಸಿಡಿಪಿ ಬಿಡುಗಡೆ ಮಾಡಲಾಗಿದೆ. ಇದನ್ನು ಸೋಷಿಯಲ್ ಮೀಡಿಯಾದಲ್ಲಿ ಡಿಪಿಯಾಗಿ ಬಳಸಿಕೊಳ್ಳಬಹುದು.

ಸೆಪ್ಟೆಂಬರ್ 2 ರಂದು ಸುದೀಪ್ ಹುಟ್ಟುಹಬ್ಬದ ನಿಮಿತ್ತ ವಿಕ್ರಾಂತ್ ರೋಣ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಇದರ ಜೊತೆಗೆ ಹೊಸ ಸಿನಿಮಾ ಘೋಷಣೆಯಾಗುವುದು ಖಂಡಿತಾ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ