ತಮ್ಮ ಬಗ್ಗೆ ಬಂದ ಸುಳ್ಳು ಸುದ್ದಿಗೆ ಸ್ಪಷ್ಟನೆ ಕೊಟ್ಟ ಕಿಚ್ಚ ಸುದೀಪ್

ಗುರುವಾರ, 9 ಮೇ 2019 (08:43 IST)
ಬೆಂಗಳೂರು: ಕಿಚ್ಚ ಸುದೀಪ್ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿರುವ ಬಗ್ಗೆ ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ಅವರೇ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.


ಕಿಚ್ಚ ಸುದೀಪ್ ದಬಾಂಗ್ 3 ಸಿನಿಮಾಗಾಗಿ ಮುಂಬೈನಲ್ಲಿ ಸಲ್ಮಾನ್ ಖಾನ್ ಜತೆಗೆ ಶೂಟಿಂಗ್ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕನ್ನಡ ನಿರ್ದೇಶಕ ಪ್ರೇಮ್ ಸುದೀಪ್ ಆಹ್ವಾನದ ಮೇರೆಗೆ ಸೆಟ್ ಗೆ ಬಂದಿದ್ದಾರೆ. ಹೀಗಾಗಿ ಇವರು ಹೊಸ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಬಂದಿದೆ.

ಇದರ ಬಗ್ಗೆ ಇದೀಗ ಕಿಚ್ಚ ಸುದೀಪ್ ಸ್ಪಷ್ಟನೆ ಮಾಡಿದ್ದಾರೆ. ‘ನಾನು ಮತ್ತು ಕೆ ಮಂಜು ನಿರ್ಮಾಣದಲ್ಲಿ ಸಲ್ಮಾನ್ ಖಾನ್ ಹೀರೋ ಆಗಿ ಪ್ರೇಮ್ ಹೊಸ ಸಿನಿಮಾವೊಂದನ್ನು ನಿರ್ದೇಶಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿರುವುದು ಶುದ್ಧ ಸುಳ್ಳು. ಇಂತಹ ಸುದ್ದಿಗಳನ್ನು ಹರಡಬೇಡಿ. ಪ್ರೇಮ್ ಕೇವಲ ಸೆಟ್ ಗೆ ಬಂದಿದ್ದರಷ್ಟೇ’ ಎಂದು ಸುದೀಪ್ ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ