ಕಾವೇರಿಗಾಗಿ ಒಂದಾದ ಕಿಚ್ಚ-ದಚ್ಚು

ಬುಧವಾರ, 20 ಸೆಪ್ಟಂಬರ್ 2023 (17:26 IST)
ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ತಮಿಳುನಾಡಿನ ಜೊತೆ ಎದ್ದಿರುವ ಸಂಘರ್ಷದ ಕುರಿತಾಗಿ ಸ್ಯಾಂಡಲ್ ವುಡ್ ಕಲಾವಿದರು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಬಗ್ಗೆ ಕಲಾವಿದರೂ ಧ‍್ವನಿಯೆತ್ತಬೇಕೆಂದು ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟನೆ ನಡೆಯಿತು.

ಇದರ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್, ಕಿಚ್ಚ ಸುದೀಪ್ ಸೋಷಿಯಲ್ ಮೀಡಿಯಾ ಮೂಲಕ ನಮ್ಮ ರೈತರಿಗೆ ಅನ್ಯಾಯವಾಗದಂತೆ ಕಾವೇರಿ ವಿವಾದ ಬಗೆಹರಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ. ನಟ ಹಾಗೂ ಸಂಸದ ಜಗ್ಗೇಶ್ ನಿನ್ನೆಯೇ ಈ ಬಗ್ಗೆ ಟ್ವೀಟ್ ಮಾಡಿದ್ದರು. ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗಿ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವ ಬಗ್ಗೆ ಪ್ರಸ್ತಾಪಿಸುವುದಾಗಿ ಹೇಳಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ