ಬೆಂಗಳೂರು: ಮೇ 24 ರಂದು ಮುಕ್ತಾಯವಾಗಲಿರುವ ಲಾಕ್ ಡೌನ್ ಮುಂದುವರಿಸಬೇಕೋ ಬೇಡವೋ ಎಂಬ ಕುರಿತು ಇನ್ನೂ ತೀರ್ಮಾನವಾಗಿಲ್ಲ. ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ನಿನ್ನೆ ಸಿಎಂ ಜೊತೆಗಿನ ಸಭೆಯಲ್ಲಿ ಹಲವು ಸಚಿವರು ಲಾಕ್ ಡೌನ್ ಮುಂದುವರಿಕೆ ಪರವಾಗಿ ಮಾತನಾಡಿದ್ದರು. ತಜ್ಞರೂ ಇದೇ ಅಭಿಪ್ರಾಯವನ್ನು ಮುಂದಿಟ್ಟಿದ್ದಾರೆ.
ಹೀಗಾಗಿ ಸಿಎಂ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದನೋಡಬೇಕಿದೆ. ಮೂಲಗಳ ಪ್ರಕಾರ ಮೇ ಅಂತ್ಯದವರೆಗೂ ಲಾಕ್ ಡೌನ್ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಮುಂದಿನ ಹಂತದಲ್ಲಿ ಕೆಲವು ನಿಯಮಗಳಿಗೆ ವಿನಾಯ್ತಿ ನೀಡುತ್ತಾರಾ ಕಾದು ನೋಡಬೇಕಿದೆ.