ಕಿಚ್ಚ ಸುದೀಪ್ ಬರ್ತ್ ಡೇಗೆ ಹೊಸ ಸಿನಿಮಾ ಘೋಷಣೆ?

ಸೋಮವಾರ, 22 ಆಗಸ್ಟ್ 2022 (09:00 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆಯಾಗಬಹುದು ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

ಈಗಾಗಲೇ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದಾದ ಬಳಿಕ ಸುದೀಪ್ ಅಧಿಕೃತವಾಗಿ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಆದರೆ ಇತ್ತೀಚೆಗೆ ಹೊಸ ಹೇರ್ ಸ್ಟೈಲ್ ಮೂಲಕ ಗಮನ ಸೆಳೆದಿದ್ದರು. ಮೂಲಗಳ ಪ್ರಕಾರ ಕಿಚ್ಚ ಹೊಸ ಸಿನಿಮಾಗೆ ತಯಾರಿ ನಡೆಸುತ್ತಿದ್ದಾರೆ. ಅದಕ್ಕೇ ಈ ಲುಕ್ ಬದಲಾವಣೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್ 2 ರಂದು ಸುದೀಪ್ ಜನ್ಮ ದಿನವಾಗಿದ್ದು ಈ ದಿನ ಹೊಸ ಸಿನಿಮಾ ಸೆಟ್ಟೇರುವ ಸಾಧ್ಯತೆಯಿದೆ ಎನ್ನಲಾಗಿದೆ. ವಿಕ್ರಾಂತ್ ರೋಣ ನಿರ್ದೇಶಕ ಅನೂಪ್ ಭಂಡಾರಿ ಜೊತೆಗೇ ಸುದೀಪ್ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ