‘ಹುಚ್ಚ’ನ ನೆನಪಲ್ಲಿ ಕಿಚ್ಚ ಸುದೀಪ್
ಹುಚ್ಚ ಸಿನಿಮಾ ಬಿಡುಗಡೆಯಾಗಿ 21 ವರ್ಷಗಳಾದ ಹಿನ್ನಲೆಯಲ್ಲಿ ಕಿಚ್ಚ ಸುದೀಪ್ ಸಿನಿಮಾ ಪೋಸ್ಟರ್ ನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಇದು ನನ್ನ ಜೀವನದ ಸುಂದರ ದಿನ ಎಂದಿದ್ದಾರೆ ಸುದೀಪ್.
ಇನ್ನು, ಇದೇ ದಿನ ತೆಲುಗಿನಲ್ಲಿ ರಾಜಮೌಳಿ ನಿರ್ದೇಶನದಲ್ಲಿ ಸುದೀಪ್ ಅಭಿನಯಿಸಿದ್ದ ಸೂಪರ್ ಹಿಟ್ ಸಿನಿಮಾ ಈಗ ಕೂಡಾ ಬಿಡುಗಡೆಯಾಗಿತ್ತು. ಈ ಸಿನಿಮಾ ಬಿಡುಗಡೆಯಾಗಿ ಇಂದಿಗೆ 10 ವರ್ಷಗಳಾಗಿವೆ. ಈ ಎರಡೂ ಸಿನಿಮಾಗಳು ನನ್ನ ಪಾಲಿಗೆ ವಿಶೇಷ ಎಂದು ಕಿಚ್ಚ ಹೇಳಿಕೊಂಡಿದ್ದಾರೆ.