ಬಿಜೆಪಿ ರೋಡ್ ಶೋ ವೇಳೆ ಕಿಚ್ಚ ಸುದೀಪ್ ನೋಡಲು ಅಭಿಮಾನಿಗಳ ನೂಕುನುಗ್ಗಲು

ಬುಧವಾರ, 26 ಏಪ್ರಿಲ್ 2023 (17:03 IST)
Photo Courtesy: Twitter
ಚಿತ್ರದುರ್ಗ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಮತಯಾಚನೆ ಮಾಡುತ್ತಿರುವ ಕಿಚ್ಚ ಸುದೀಪ್ ಇಂದು ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ನಡೆದ ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ.

ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಪರ ಕಿಚ್ಚ ಅಬ್ಬರದ ಪ್ರಚಾರ ನಡೆಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮೇಲಿನ ಗೌರವದಿಂದ ಈ ಬಾರಿ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡುತ್ತಿದ್ದಾರೆ.

ಇನ್ನು, ರೋಡ್ ಶೋ ವೇಳೆ ತಮ್ಮ ನೆಚ್ಚಿನ ನಟ ಕಿಚ್ಚ ಸುದೀಪ್ ರನ್ನು ಕಾಣಲೆಂದೇ ಅಭಿಮಾನಿಗಳ ಸಾಗರವೇ ಹರಿದುಬಂದಿತ್ತು. ಅವರೆಲ್ಲರತ್ತ ಕೈ ಬೀಸಿ, ಫ್ಲೈಯಿಂಗ್ ಕಿಸ್ ನೀಡಿ ಕಿಚ್ಚ ತಮ್ಮ ಧನ್ಯವಾದ ಸಲ್ಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ