ಕಿಚ್ಚ ಸುದೀಪ್ ಹೊಸ ಸಿನಿಮಾ ಕೆಲಸ ಶುರು

ಸೋಮವಾರ, 22 ಮೇ 2023 (09:51 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುಂದಿನ ಸಿನಿಮಾಗಾಗಿ ಕಾದಿರುವ ಪ್ರೇಕ್ಷಕರಿಗೆ ಸಿಹಿ ಸುದ್ದಿ ಕಾದಿದೆ.

ನಾಳೆಯಿಂದ ಕಿಚ್ಚ ಸುದೀಪ್ ಹೊಸ ಸಿನಿಮಾ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಕಿಚ್ಚ46 ಸಿನಿಮಾದ ಪ್ರೋಮೋ ಶೂಟ್ ನಾಳೆಯಿಂದ ಆರಂಭವಾಗಲಿದೆ. ಜೂನ್ ಮೊದಲ ವಾರದಲ್ಲಿ ಸಿನಿಮಾ ಬಗ್ಗೆ ಅಪ್ ಡೇಟ್ ಕೊಡುವುದಾಗಿ ಸುದೀಪ್ ಈಗಾಗಲೇ ಹೇಳಿಕೊಂಡಿದ್ದರು.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಿಚ್ಚ ಸುದೀಪ್ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸಿದ್ದರು. ಹೀಗಾಗಿ ಸಿನಿಮಾಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ