Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ
ಮ್ಯಾಕ್ಸ್ ಸಿನಿಮಾ ಬಿಡುಗಡೆ ಬಳಿಕ ಕೆಲವು ದಿನ ಬ್ರೇಕ್ ತೆಗೆದುಕೊಂಡಿದ್ದ ಸುದೀಪ್ ಈಗ ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಬಹಳ ಸಮಯದ ಹಿಂದೆಯೇ ಅವರು ಪ್ಲ್ಯಾನ್ ಮಾಡಿಕೊಂಡಿದ್ದರು. ಇದೀಗ ಸಿನಿಮಾ ಸೆಟ್ಟೇರಿದೆ.
ವಿಕ್ರಾಂತ್ ರೋಣ ಸಿನಿಮಾ ನಿರ್ದೇಶಕ, ಕತೆಗಾರ ಅನೂಪ್ ಭಂಡಾರಿಯೇ ಈ ಸಿನಿಮಾವನ್ನೂ ಮಾಡುತ್ತಿದ್ದಾರೆ. ನಿನ್ನೆಯಿಂದ ಸಿನಿಮಾ ಚಿತ್ರೀಕರಣ ಶುರುವಾಗಿದೆ ಎಂದು ಕಿಚ್ಚ ಸುದೀಪ್ ಮಾಹಿತಿ ನೀಡಿದ್ದಾರೆ. ಇದು ಅಭಿಮಾನಿಗಳಲ್ಲಿ ಖುಷಿ ತಂದಿದೆ.
ಇನ್ನು, ಚಿತ್ರದಲ್ಲಿ ಯಾರೆಲ್ಲಾ ಇರಲಿದ್ದಾರೆ ಎಂಬ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿದೆ. ಆದರೆ ಈ ಬಗ್ಗೆ ಸದ್ಯಕ್ಕೆ ಏನೂ ಹೇಳಲ್ಲ. ಮುಂದೆ ಎಲ್ಲವನ್ನೂ ಹೇಳಲಿದ್ದೇವೆ ಎಂದು ಕಿಚ್ಚ ಸ್ಪಷ್ಟನೆ ನೀಡಿದ್ದಾರೆ.