ಇಂದಿನಿಂದ ಕಬ್ಜ ಶೂಟಿಂಗ್ ನಲ್ಲಿ ಮುಕುಂದ-ಮುರಾರಿ ಜೋಡಿಯ ಕಮಾಲ್

ಬುಧವಾರ, 15 ಡಿಸೆಂಬರ್ 2021 (09:35 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಶೂಟಿಂಗ್ ಭರದಿಂದ ಸಾಗುತ್ತಿದೆ. ಇಂದಿನಿಂದ ಕಿಚ್ಚ ಸುದೀಪ್ ಕೂಡಾ ಶೂಟಿಂಗ್ ನಲ್ಲಿ ಭಾಗಿಯಾಗುತ್ತಿದ್ದಾರೆ.

ಆರ್. ಚಂದ್ರು ನಿರ್ದೇಶನದ ಕಬ್ಜ ಸಿನಿಮಾದಲ್ಲಿ ಸುದೀಪ್ ಕೂಡಾ ವಿಶೇಷ ಪಾತ್ರ ಮಾಡುತ್ತಿದ್ದಾರೆ. ಅದರ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿತ್ತು. ಇಂದಿನಿಂದ ಸುದೀಪ್ ತಮ್ಮ ಭಾಗದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಕುಂದ-ಮುರಾರಿ ಸಿನಿಮಾ ಬಳಿಕ ಈ ಜೋಡಿ ಮತ್ತೆ ಬೆಳ್ಳಿ ತೆರೆಯಲ್ಲಿ ಒಟ್ಟಾಗಿ ನಟಿಸುತ್ತಿರುವ ಸಿನಿಮಾವಿದು. 80 ರ ದಶಕದ ಭೂಗತ ಲೋಕದ ಕತೆಯುಳ್ಳ ಸಿನಿಮಾ ಇದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ