ಸುದೀಪ್ ಹುಟ್ಟುಹಬ್ಬಕ್ಕೆ ಕಿಚ್ಚ 46 ಟೈಟಲ್ ಅನಾವರಣ?

ಸೋಮವಾರ, 21 ಆಗಸ್ಟ್ 2023 (08:30 IST)
ಬೆಂಗಳೂರು: ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿವೆ. ಇದರ ಬೆನ್ನಲ್ಲೇ ಅಭಿಮಾನಿಗಳಲ್ಲಿ ಅವರ ಹುಟ್ಟುಹಬ್ಬದ ದಿನ ಸಿಗಬಹುದಾದ ಅಪ್ ಡೇಟ್ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿದೆ.

ಸುದೀಪ್ ನಟಿಸುತ್ತಿರುವ ಕಿಚ್ಚ46 ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ  ವಿಶೇಷ ಸೆಟ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ತಮಿಳು ನಿರ್ಮಾಣ ಸಂಸ್ಥೆ, ನಿರ್ದೇಶಕರು ಈ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಫಸ್ಟ್ ಲುಕ್ ಕೂಡಾ ಬಿಡುಗಡೆಯಾಗಿದೆ.

ಆದರೆ ಟೈಟಲ್ ಇನ್ನೂ ಅನಾವರಣಗೊಂಡಿಲ್ಲ. ಸೆಪ್ಟೆಂಬರ್ 2 ರಂದು ಕಿಚ್ಚ ಸುದೀಪ್ ಹುಟ್ಟುಹಬ್ಬವಿದ್ದು ಈ ದಿನ ಚಿತ್ರದ ಟೈಟಲ್ ಅನಾವರಣಗೊಳ್ಳಬಹುದು ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ