‘ರಾನಿ’ಯಾಗಿ ನಿಮ್ಮ ಮುಂದೆ ಬರಲಿದ್ದಾರೆ ಕನ್ನಡತಿ ಕಿರಣ್ ರಾಜ್

ಶುಕ್ರವಾರ, 7 ಜುಲೈ 2023 (09:00 IST)
Photo Courtesy: Instagram
ಬೆಂಗಳೂರು: ಕನ್ನಡತಿ ಖ್ಯಾತಿಯ ಕಿರಣ್ ರಾಜ್ ಧಾರವಾಹಿ ಮುಗಿದ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿಯಾಗಿದ್ದಾರೆ.

ಕಿರಣ್ ರಾಜ್ ಇದುವರೆಗೆ ಕೆಲವು ಸಿನಿಮಾಗಳನ್ನು ಮಾಡಿದ್ದರೂ ಅದರಿಂದ ಹೇಳಿಕೊಳ್ಳುವ ಯಶಸ್ಸು ಸಿಕ್ಕಿರಲಿಲ್ಲ. ಕನ್ನಡತಿ ಧಾರವಾಹಿ ಮುಗಿದ ಮೇಲೆ ಇನ್ನು ಸಂಪೂರ್ಣವಾಗಿ ಸಿನಿಮಾಗಳಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿದ್ದರು.

ಅದರಂತೆ ಇದೀಗ ರಾನಿ ಎನ್ನುವ ಸಿನಿಮಾದಲ್ಲಿ ಅಭಿನಯಿಸಿದ್ದು ಅದರ ಟೀಸರ್ ಈಗ ಬಿಡುಗಡೆಯಾಗಿದೆ. ಇದರಲ್ಲಿ ಕಿರಣ್ ರಾಜ್ ಕೊಂಚ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ